ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಬೀಗ ಹಾಕಲಾಗಿದ್ದು, ಸೀಸ್ ಮಾಡಲಾಗಿದೆ ಎನ್ನಲಾಗಿದೆ. ತೆರಿಗೆ ಬಾಕಿಯನ್ನು ಉಳಿಸಿಕೊಂಡಿರುವ ಹಿನ್ನಲೆಯಲ್ಲಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆಯೇ ಬೀಗ ಜಡಿದಿದ್ದಾರೆ ಎನ್ನಲಾಗಿದೆ. ಇದಲ್ಲದೇ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನಲೆಯಲ್ಲಿ ಮಂತ್ರಿ ಮಾಲ್ ಲೈಸನ್ಸ್ ರದ್ದುಪಡಿಸಿ, ನೋಟಿಸ್ ಅಂಟಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಇಂದು ಬೆಳಿಗ್ಗೆ ಮಂತ್ರಿ ಮಾಲ್ ಮೇಲೆ ದಾಳಿ ನಡೆಸಿ, ಅದರ ಬಾಗಿಲುಗಳನ್ನು ಲಾಕ್ ಮಾಡಿ, ತೆರಿಗೆ ಬಾಕಿಯಿಂದಾಗಿ ಟ್ರೇಡ್ ಲೈಸೆನ್ಸ್ ಅನ್ನು ಅಮಾನತುಗೊಳಿಸಿದ್ದಾರೆ. ಮಾಲ್, ಇಂತಹ ಕ್ರಮವನ್ನು ಎದುರಿಸುತ್ತಿರುವುದು ಇದೇ ಮೊದಲಲ್ಲ.