ಗದಗ: ಮಕ್ಕಳ ಪಾಲನಾ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತ ಬಾಲಕಿ ಗರ್ಭಿಣಿಯಾಗಿದ್ದಾಳೆ. ಗದಗ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.
2019ರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಹಿನ್ನೆಲೆ ಕೇಂದ್ರಕ್ಕೆ ಶಿಫ್ಟ್ ಮಾಡಿಸಲಾಗಿತ್ತು. ಆಧಾರ್ ಕಾರ್ಡ್ ಮಾಡಿಸಲು ಮನೆಗೆ ಹೋಗಿದ್ದು, ವಾಪಸ್ ಬರುವಾಗ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ತಂದೆಯೊಂದಿಗೆ ಮನೆಗೆ ಹೋಗಿ ಪರಿಚಯಸ್ಥ ವ್ಯಕ್ತಿಯೊಂದಿಗೆ ಬಾಲಕಿ ವಾಪಸಾಗುತ್ತಿದ್ದಳು.
ಪರಿಚಯಸ್ಥ ವ್ಯಕ್ತಿ ನಾರಾಯಣಸಿಂಗ್ನಿಂದಲೇ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ತಿಳಿದುಬಂದಿದೆ. 35 ವರ್ಷದ ಮೂರು ಮಕ್ಕಳ ತಂದೆಯಿಂದಲೇ ಈ ನೀಚ ಕೃತ್ಯ ನಡೆದಿದೆ. ಬಾಲಕಿ ಗರ್ಭಿಣಿಯಾದ ಮೇಲೆ ಅತ್ಯಾಚಾರವಾದ ಬಗ್ಗೆ ಮಾಹಿತಿ ಬಹಿರಂಗವಾಗಿದೆ.
ಕಂಗಾಲಾದ ಮಕ್ಕಳ ಪಾಲನಾ ಕೇಂದ್ರದ ಸಿಬ್ಬಂದಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಗಸ್ಟ್ 26 ನೇ ತಾರೀಖು ಮಹಿಳಾ ಠಾಣೆ ಪೊಲೀಸರಿಗೆ ಸಿಬ್ಬಂದಿ ದೂರು ನೀಡಿದ್ದಾರೆ. ಮಹಿಳಾ ಠಾಣೆ ಪೊಲೀಸರು ಆರೋಪಿ ನಾರಾಯಣಸಿಂಗ್ನನ್ನು ಬಂಧಿಸಿದ್ದಾರೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ತಿಳಿಸಿದ್ದಾರೆ.