ಮಂಗಳೂರು: ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಹೆಸರಲ್ಲಿ ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಗಿರೀಶ್ ಮಟ್ಟಣ್ಣವರ್ ಮದನ್ ಎಂಬಾತನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಸುಳ್ಳು ಹೇಳಿ ಮಾಧ್ಯಮಗಳ ಮುಂದೆ ಪರಿಚಯಿಸಿದ್ದರು.
ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ದೂರಿನಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಹಾಗೂ ಮದನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.