ಗುವಾಹಟಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊವನ್ನು ಶೇರ್ ಮಾಡದಂತೆ ಟ್ವೀಟರ್ ಸೇರಿದಂತೆ ಇತರೆ ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ.
ಈ ವಿಷಯವು ಪ್ರಸ್ತುತ ತನಿಖೆಯಲ್ಲಿದೆ, ಮತ್ತು ಈ ಪರಿಸ್ಥಿತಿಯಲ್ಲಿ ಭಾರತೀಯ ಕಾನೂನುಗಳನ್ನು ಅನುಸರಿಸುವುದು ಕಡ್ಡಾಯ ಎಂದು ಸರ್ಕಾರ ಹೇಳಿದೆ. ಮಣಿಪುರದ ಇಬ್ಬರು ಮಹಿಳೆಯರ ಮೇಲೆ ರಸ್ತೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೊ ಒಂದು ದಿನದ ಹಿಂದೆ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ವೀಡಿಯೊಗೆ ಅಧಿಕೃತ ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೆ.ಮೇಘಚಂದ್ರ ಸಿಂಗ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಅಪರಿಚಿತ ಸಶಸ್ತ್ರ ದುಷ್ಕರ್ಮಿಗಳ ವಿರುದ್ಧ ತೌಬಲ್ ಜಿಲ್ಲೆಯ ನೊಂಗ್ಪೊಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿದೆ.