ಕರ್ನಾಟಕದಲ್ಲಿ ಏ.268 & ಮೇ 7ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಿದೆ.
ಈ 2ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿ ನಾವು IT ವಲಯ ಸೇರಿ ಖಾಸಗಿ ಕಂಪನಿಗಳನ್ನು ಸಂಪರ್ಕ ಮಾಡಿದ್ದು ಅಲ್ಲಿನ CEO ಮತ್ತು ಮ್ಯಾನೇಜ್‌ಮೆಂಟ್‌ಗಳನ್ನು ಭೇಟಿಯಾಗಿ ಮತ ಚಲಾಯಿಸಲು ಸಿಬ್ಬಂದಿಗೆ ಉತ್ತೇಜಿಸುವಂತೆ ಹೇಳಿದ್ದೇವೆ ಎಂದು ತಿಳಿಸಿದರು