ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಶಿಕಾರಿಪುರ ಕ್ಷೇತ್ರದ ಶಾಸಕ ಬಿ ವೈ ವಿಜಯೇಂದ್ರ ಅವರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಶಿಕಾರಿಪುರದ ತಾಲೂಕ ಕಚೇರಿಯ ಆಡಳಿತ ಸೌಧದ ಮತಗಟ್ಟೆ ಸಂಖ್ಯೆ 137 ರಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಶಿಕಾರಿಪುರ ಕ್ಷೇತ್ರದ ಶಾಸಕ ಬಿ ವೈ ವಿಜಯೇಂದ್ರ ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ.
				
															
                    
                    
                    































