ಮತ್ಸ್ಯವಾಹಿನಿ’ ಇ-ತ್ರಿಚಕ್ರ ವಾಹನ ಪರವಾನಿಗೆಗಾಗಿ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ : ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಸ್ಥಳೀಯವಾಗಿ ಮೀನು ಸೇವೆ ಪ್ರೋತ್ಸಾಹಿಸಲು ಪರಿಸರ ಸ್ನೇಹಿ ಸುಸಜ್ಜಿತ ಕಿಯೋಸ್ಕ್ ಮಾದರಿ ಇ-ತ್ರಿಚಕ್ರ ವಾಹನಗಳಲ್ಲಿ ತಾಜಾ ಮೀನು ಉತ್ಪನ್ನ ಮಾರಾಟಕ್ಕಾಗಿ ಸಾರ್ವಜನಿಕ ಸಹಭಾಗಿತ್ವದ ಮೂಲಕ, ಇ-ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಮೀನುಗಾರಿಕೆಯಲ್ಲಿ ತೊಡಗಿರುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ನ.04 ಅರ್ಜಿ ಸಲ್ಲಿಸಲು ಕೊನೆಯ ದಿನ.

ಚಿತ್ರದುರ್ಗ ಜಿಲ್ಲೆಗೆ 3 ಭೌತಿಕ ಗುರಿ ನಿಗದಿಪಡಿಸಲಾಗಿದ್ದು, ಸಾಮಾನ್ಯ ವರ್ಗದವರಿಗೆ ಭದ್ರತಾ ಠೇವಣಿ ಮೊತ್ತ ರೂ.1 ಲಕ್ಷ, ಪರಿಶಿಷ್ಟ ಜಾತಿ, ಪಂಗಡ ಮಹಿಳೆಯರಿಗೆ ರೂ.0.50 ಲಕ್ಷ ನಿಗದಿಪಡಿಸಲಾಗಿದೆ. ಪರವಾನಗಿದಾರರು ಮಾಹೆಯಾನ ರೂ.3000/ ಮಾಸಿಕ ಶುಲ್ಕ ಭರಿಸಬೇಕಾಗುತ್ತದೆ.

ಆಸಕ್ತರು ನವೆಂಬರ್ 4ರ ಒಳಗಾಗಿ ಅರ್ಜಿ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ, ಹೊಸದುರ್ಗ, ಹಿರಿಯೂರು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ  ಉನಿರ್ದೇಶಕರು ತಿಳಿಸಿದ್ದಾರೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon