ದೆಹಲಿ: ಇಂದು ದಿಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅವಧಿ ಮುಕ್ತಾಯವಾದ ಹಿನ್ನಲೆ ಅವರು ಮತ್ತೆ ತಿಹಾರ್ ಜೈಲಿಗೆ ಮರಳಲಿದ್ದಾರೆ.
ಕೇಜ್ರಿವಾಲ್ ಅವರು ಜೈಲಿಗೆ ಹೋಗುವ ಮುನ್ನ ತಮ್ಮ ಪಕ್ಷದ ನಾಯಕರೊಂದಿಗೆ ಚಿಂತನ-ಮಂಥನ ನಡೆಸಿದರು. ಇನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅವರು ತಿಹಾರ್ ಜೈಲಿಗೆ ಹೋಗಲಿದ್ದಾರೆ.
ಗಂಭೀರ ಅನಾರೋಗ್ಯದ ಸಮಸ್ಯೆ ಇದೆ ಹೀಗಾಗಿ ಕೆಲ ತಪಾಸಣೆಗೆ ಒಳಪಡಬೇಕಾಗಿರುವುದರಿಂದ ತನ್ನ ಜಾಮೀನು ಅವಧಿ ವಿಸ್ತರಿಸುವಂತೆ ಕೇಜ್ರಿವಾಲ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂಕೋರ್ಟ್ ಇದನ್ನು ತಿರಸ್ಕರಿಸಿತ್ತು. ಬಳಿಕ ಹೈಕೋರ್ಟ್ ಮೊರೆ ಹೋಗಿದ್ದರು, ಅರ್ಜಿಯ ಆದೇಶವನ್ನು ಕೋರ್ಟ್ ಜೂನ್ ೫ಕ್ಕೆ ಮುಂದೂಡಿದೆ.
ಅರವಿಂದ್ ಕೇಜ್ರಿವಾಲ್ ೫೫ ದಿನಗಳ ಕಾಲ ಜೈಲು ವಾಸದ ಬಳಿಕ ಮೇ 10ರಂದು ಮಧ್ಯಂತರ ಜಾಮೀನು ಪಡೆದು ಚುನಾವಣಾ ಪ್ರಚಾರಕ್ಕಾಗಿ ಹೊರಬಂದಿದ್ದರು. ಅವರು 10 ದಿನಗಳ ಕಾಲ ಇಡಿ ವಶದಲ್ಲಿದ್ದರು. ಏಪ್ರಿಲ್ 1 ರಂದು ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನದಲ್ಲಿ ತಿಹಾರ್ ಜೈಲಿಗೆ ಕಳುಹಿಸಿತು. ಅಲ್ಲಿ 39 ದಿನಗಳನ್ನು ಕಳೆದರು. ಇದೀಗ ಮತ್ತೊಮ್ಮೆ ಕೇಜ್ರಿವಾಲ್ ತಿಹಾರ್ ಜೈಲಿಗೆ ತೆರಳಬೇಕಾಗಿದೆ. ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಇಡಿ 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್ 21ರಂದು ಅವರನ್ನು ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು.