ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಆಲಂಬಾಗ್ ರೈಲ್ವೆ ಕಾಲೋನಿಯಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಶನಿವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಈ ಅವಘಡದಲ್ಲಿ 3 ಮಕ್ಕಳು ಸೇರಿದಂತೆ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಖೇಧ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.