ಹೊಸಪೇಟೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ವ್ಯವಸ್ಥಾಪಕ ಕೆ. ಭೀಮಪ್ಪ ಅವರು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಪ್ರವರ್ಗ-3ಬಿ ಅಡಿಯಲ್ಲಿ 2ಎ ಇಂದ 2ಎಫ್ ವರೆಗೆ ಬರುವ ಸಮುದಾಯಕ್ಕೆ ಸೇರಿದ ಅರ್ಜಿದಾರರು ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.
ಶ್ರೀ ಶಹಜೀರಾಜೇ ಸಮೃದ್ಧಿ ಯೊಜನೆ(ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು-ಜಲಭಾಗ್ಯ ಯೋಜನೆ, ಅರಿವು ಶೈಕ್ಷಣಿಕ ಸಾಲ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟಿç ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ ಸೌಲಭ್ಯ ಪಡೆಯಲು ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಅ.30ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಾಲತಾಣ https://kmcdc.karnataka.gov.in ಭೇಟಿ ನೀಡಬಹುದು. ಅಥವಾ ಹೊಸಪೇಟೆ ತಾಲ್ಲೂಕು ಕಚೇರಿಯ ಮೊದಲನೇ ಮಹಡಿ ಕೊಠಡಿ ಸಂಖ್ಯೆ 4ರಲ್ಲಿರುವ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಬಹುದು. ದೂ.08394-267038.