ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಆಘಾತ – ಚುನಾವಣಾ ಪೂರ್ವ ಸಮೀಕ್ಷೆ ವಿವರ

ನವೆಂಬರ್, ಡಿಸೆಂಬರ್ 2024 ರಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ. ಆಡಳಿತಾರೂಢ ಎನ್‌ಡಿಎ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯುವ ಕನಸು ಕಾಣುತ್ತಿದ್ದು, ಈ ಬಾರಿ ಆಘಾತ ಎದುರಾಗುವ ಸೂಚನೆ ಸಿಕ್ಕಿದೆ.

ಲೋಕ್‌ ಪೋಲ್ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ ಅಘಾಡಿ 141 ರಿಂದ 154 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತದೆ ಎಂದು ಅಂದಾಜಿಸಿದೆ. ಇನ್ನು ಆಡಳಿತಾರೂಢ ಎನ್‌ಡಿಎ 115 ರಿಂದ 128 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಿದೆ.

ಇತರೆ ಅಥವಾ ಸ್ವತಂತ್ರ ಅಭ್ಯರ್ಥಿಗಳು 5 ರಿಂದ 18 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿಸಿದೆ. 288 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲು 145 ಸದಸ್ಯರ ಬಲ ಬೇಕಾಗಿದೆ. ಈ ಲೆಕ್ಕಾಚಾರದಲ್ಲಿ ಮಹಾ ವಿಕಾಸ ಅಘಾಡಿ ಸರಳ ಬಹುಮತ ಪಡೆಯಬಹುದು ಎಂದು ಸಮೀಕ್ಷೆ ಹೇಳಿದೆ. ಮಹಾರಾಷ್ಟ್ರದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 500 ಮಾದರಿಗಳಂತೆ ಒಟ್ಟು 1.50 ಲಕ್ಷ ಜನರ ಅಭಿಪ್ರಾಯ ಸಂಗ್ರಹಿಸಿದೆ.

Advertisement

ಚುನಾವಣೆಗೆ ಇನ್ನೂ ಎರಡು ತಿಂಗಳು ಬಾಕಿ ಇರುವ ಕಾರಣ ಜನಾಭಿಪ್ರಾಯ ಎತ್ತ ಕಡೆ ಬೇಕಾದರೂ ವಾಲಬಹುದಾಗಿದೆ. ಏಕನಾಥ್ ಶಿಂಧೆ ಅವರ ಸರ್ಕಾರ ಮಹಾರಾಷ್ಟ್ರದ ಜನರ ಮನಸ್ಸು ಗೆಲ್ಲುವಲ್ಲಿ ವಿಫಲವಾಗಿದೆ ಎನ್ನುವುದು ಮಾತ್ರ ಈ ಸಮೀಕ್ಷೆಯಿಂದ ಸಾಬೀತಾಗಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement