ಬೆಂಗಳೂರು: ಮುಂದಿನ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ನಡೆದ ನಂತರವಷ್ಟೇ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ ಎಂದು ಮಸೂದೆಯಲ್ಲಿಯೇ ಹೇಳಿರುವುದರಿಂದ ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಕನಿಷ್ಠ 20 ವರ್ಷ ಬೇಕಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.
ಮುಂದಿನ ಜನಗಣತಿ 2026 & ಕ್ಷೇತ್ರಮರುವಿಂಗಡಣೆ 2031ರಲ್ಲಿ ನಡೆಯುವ ಸಾಧ್ಯತೆ ಇದೆ. ಇದರಲ್ಲಿ ಮಹಿಳೆಯರಿಗೆ ರಾಜಕೀಯ ನ್ಯಾಯಕೊಡಿಸುವುದಕ್ಕಿಂತಲೂ ಹೆಚ್ಚಾಗಿ ರಾಜಕೀಯ ಲಾಭ ಪಡೆಯುವ ಸ್ವಾರ್ಥವೇ ಕಾಣುತ್ತಿದೆ ಎಂದು ಟೀಕಿಸಿದ್ದಾರೆ.