ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ.
ಕಾನೂನು ಸಚಿವಾಲಯದ ಅಧಿಸೂಚನೆಯ ಪ್ರಕಾರ, ರಾಷ್ಟ್ರಪತಿಗಳು ಗುರುವಾರ ಅವರಿಗೆ ಒಪ್ಪಿಗೆ ನೀಡಿದ್ದು. ಈಗ ಇದನ್ನು ಅಧಿಕೃತವಾಗಿ ಸಂವಿಧಾನ (106 ನೇ ತಿದ್ದುಪಡಿ) ಕಾಯಿದೆ ಎಂದು ಕರೆಯಲಾಗುತ್ತದೆ.
ಇನ್ನು ಕೇಂದ್ರ ಸರಕಾರವು ಅಧಿಕೃತ ಗೆಜೆಟ್‌ನಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸುವ ದಿನಾಂಕದಂದು ಇದು ಜಾರಿಗೆ ಬರುತ್ತದೆ.