ಬೆಂಗಳೂರು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಬೊಮ್ಮಾಯಿ ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಇದಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಬಸವರಾಜ ಬೊಮ್ಮಾಯಿ ಅವರು ಬೇಗ ಗುಣಮುಖರಾಗಲಿದೆ ಹಾರೈಸಿದ್ದಾರೆ.