ಮಾಜಿ ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರು ಜ್ವರ ಮತ್ತು ಹೃದಯ ಸಂಬಂಧಿ ಸೋಂಕಿನಿಂದ ಬಳಲುತ್ತಿದ್ದ ಅವರು ಪುಣೆಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರುವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 89 ವರ್ಷ ವಯಸ್ಸಿನ ಪ್ರತಿಭಾ ದೇವಿಸಿಂಗ್ ಪಾಟೀಲ್ ವಕೀಲರಾಗಿ ಬಳಿಕ ರಾಜಕಾರಣಕ್ಕೆ ಧುಮುಕಿದರು. 2007ರಿಂದ 2012ರವರೆಗೆ 12ನೇ ಮಹಿಳಾ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ದೇಶದ ಮೊದಲ ಮಹಿಳಾ ರಾಷ್ಟ್ರಪತಿಯಾದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ.