ಮಾಜಿ ಸಚಿವೆ, ಸಂಸದರ ಜಮೀನಿಗೂ ವಕ್ಫ್ ಭೀತಿ

WhatsApp
Telegram
Facebook
Twitter
LinkedIn

ಚಿಕ್ಕೋಡಿ :ವಿಜಯಪುರದಲ್ಲಿ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಕ್ಷೇತ್ರದ ಹೊನವಾಡ ಗ್ರಾಮದ 15 ರೈತರಿಗೆ ನೋಟಿಸ್ ನೀಡಲಾಗಿತ್ತು. ನೋಟಿಸ್‌ನಲ್ಲಿ ನಿಮ್ಮ ಜಮೀನು ವಕ್ಫ್ ಆಸ್ತಿಯಾಗಿದ್ದು, ಪಹಣಿ ಪತ್ರದಲ್ಲಿ ಕಾಲಂ ನಂ 11 ಹಾಗೂ 9ರಲ್ಲಿ ಉಲ್ಲೇಖಿಸಿ, 2 ದಿನದಲ್ಲಿ ತಕರಾರು ಸಲ್ಲಿಸಲು ಸೂಚನೆ ನೀಡಲಾಗಿತ್ತು. ಇದೀಗ ವಕ್ಫ್ ಭೀತಿ ಮಾಜಿ ಸಚಿವೆ, ಮಾಜಿ ಸಂಸದರಿಗೂ ಕಾಡಲಾರಂಭಿಸಿದೆ.

ಮಾಜಿ ಸಚಿವೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮತ್ತು ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಪುತ್ರ ಬಸವ ಪ್ರಸಾದ್ ಜೊಲ್ಲೆ ಮಾಲೀಕತ್ವದ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದೆ ಎಂದು ವರದಿಯಾಗಿದೆ. ಯಕ್ಸಂಬಾ ಪಟ್ಟಣದಲ್ಲಿರುವ ಜೊಲ್ಲೆ ಮಾಲೀಕತ್ವದ 3 ಎಕರೆಗಿಂತಲೂ ಹೆಚ್ಚಿನ ಜಮೀನಿನ ಮೇಲೆ ವಕ್ಫ್ ಕಣ್ಣು ಹಾಕಿದೆ.ಯಕ್ಸಂಬಾ ಪಟ್ಟಣದ ಜೊಲ್ಲೆ ಕುಟುಂಬದ ಹಲವರ ಜಮೀನುಗಳ ಪಹಣಿಯಲ್ಲಿ ವಕ್ಫ್ ಆಸ್ತಿ ಎಂಬುವುದಾಗಿ ನಮೂದಾಗಿದೆ.

ವಕ್ಫ್ ವಿವಾದದ ವಿಚಾರವಾಗಿ ಕರಾಳ ದೀಪಾವಳಿ ಆಚರಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಬಳಿಕ ರೈತರಿಗೆ ನೀಡಿದ್ದ ನೋಟಿಸ್‌ನ್ನು ಜಿಲ್ಲಾಡಳಿತ ಹಿಂಪಡೆದಿತ್ತು. ಎನ್ನಲಾಗಿದೆ. ಇದೀಗ ಶಾಸಕರು ಮಾಜಿ ಸಂಸದತರಿಗೂ ನೋಟಿಸ್ ಬಂದಿರುವ ಕಾರಣ ಸರ್ಕಾರದ ಮುಂದಿನ ಕ್ರಮದ ಬಗ್ಗೆ ನಿರೀಕ್ಷಿಸಲಾಗಿದೆ.

 

BC Suddi   About Us
For Feedback - [email protected]

Related News

LATEST Post

WhatsApp Icon Telegram Icon