ಬೆಂಗಳೂರು: ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣಗೆ ನ್ಯಾಯಾಂಗ 7 ದಿನಗಳ ಬಂಧನ ವಿಧಿಸಲಾಗಿದೆ. ಮೇ. 14ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 17ನೇ ACMM ನ್ಯಾಯಾಲಯ ಆದೇಶಿಸಿದೆ.
ಅವರ ಕಸ್ಟಡಿ ಇಂದು ಅಂತ್ಯವಾಗಲಿದ್ದ ಹಿನ್ನೆಲೆಯಲ್ಲಿ ಅವರನ್ನು SIT ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ಸದ್ಯ ಕೋರ್ಟ್ ಆದೇಶದ ಹಿನ್ನೆಲೆ ಅಧಿಕಾರಿಗಳು ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲು ಕರೆದೊಯ್ಯುತ್ತಿದ್ದಾರೆ. ಇನ್ನು, ನಾಳೆ ರೇವಣ್ಣ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.


































