ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗಾಗಿ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ ಮಂಜೂರಾತಿಗಾಗಿ ಮತ್ತು ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪೆÇ್ಲೀಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮಾಜಿ ಸೈನಿಕರು ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ನವಂಬರ್ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ನ್ನು ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು(ಪ್ರಭಾರ), ಸಿ.ಎ ಹಿರೇಮಠ ತಿಳಿಸಿದ್ದಾರೆ.