ದಾವಣಗೆರೆ,;ಕೇಂದ್ರೀಯ ಸೈನಿಕ ಮಂಡಳಿಯಿಂದ ಆರ್ಥಿಕ ನೆರವು ಶೀರ್ಷಿಕೆಯಡಿ ಹವಾಲ್ದಾರ್ ರ್ಯಾಂಕ್‍ವರೆಗಿನ ಮತ್ತು ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆಯಡಿ ಜೆ.ಸಿ.ಓ ರ್ಯಾಂಕ್‍ವರಗಿನ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ www.ksb.gov.in ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಹವಾಲ್ದಾರ್ ರ್ಯಾಂಕ್ ಹೊರಗಿನ ಮಾಜಿ ಸೈನಿಕರ ಮಕ್ಕಳು ಒಂದನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ವ್ಯಾಸಂಗ ಮಾಡುತ್ತಿರುವವರು ಅಕ್ಟೋಬರ್ 31 ರೊಳಗಾಗಿ ಹಾಗೂ ವೃತ್ತಿಪರ ಶಿಕ್ಷಣವಲ್ಲದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಜೆ.ಸಿ.ಓ ರ್ಯಾಂಕ್ ವರೆಗಿನ ಮಾಜಿ ಸೈನಿಕರ ಮಕ್ಕಳು ದ್ವಿತೀಯ ಪಿಯುಸಿಯಲ್ಲಿ ಶೇ 60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ ಪ್ರವೇಶಾತಿ ವರ್ಷದಲ್ಲಿಯೇ ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ. ಸಂ. 08182-220925 ಗೆ ಸಂಪರ್ಕಿಸಲು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ.ಸಿ.ಎ ಹಿರೇಮಠ ತಿಳಿಸಿದ್ದಾರೆ.