‘ಮಾತಿನಲ್ಲೂ ಮೌಲ್ಯಗಳದ್ದೇ ಮಥನ; ಕೊನೆಗೆ, ಝಣ ಝಣ ಕಾಂಚಾಣ’ -ಸಿಎಂ ವಿರುದ್ದ ಹೆಚ್‌ಡಿಕೆ ಕಿಡಿ

ಬೆಂಗಳೂರು : “ಬಾಯಿ ತೆರೆದರೆ ಭಗವದ್ಗೀತೆ, ನಾಲಿಗೆ ಮೇಲೆ ನೈತಿಕತೆಯ ನಾಟ್ಯ, ಮಾತು ಮಾತಿನಲ್ಲೂ ಮೌಲ್ಯಗಳದ್ದೇ ಮಥನ! ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ. ನಾಚಿಕೆಯಾಗಬೇಕು” ಎಂದು ಸರಣಿ ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ವಿರುದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

“ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸುಳಿದ್ದು ಹೇಗೆ? ಓಹ್, ಒಂದು ಸರಕಾರ, ವಿಸ್ಮಯಗಳ ಆಗರ. ಡೂಪ್ಲಿಕೇಟ್‌ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ ಸಿಎಸ್​ಆರ್​ ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ” ಎಂದು ಬರೆದುಕೊಂಡಿದ್ದಾರೆ

“ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ‘ಬರ್ಮುಡಾ ಟ್ರ್ಯಾಂಗಲ್’ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು. ಅದು ನಿಮ್ಮ ದುರ್ವಿಧಿ. ಆನ್ಸರ್‌ ಮಾಡಿ ಸಿದ್ದರಾಮಯ್ಯನವರೇ?” ಎಂದು ಪ್ರಶ್ನಿಸಿದ್ದಾರೆ.

Advertisement

“ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ 71 ಪೊಲೀಸ್‌ ಇನ್ಸ್ ಸ್ಪೆಕ್ಟರ್‌ಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು. ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ?” ಎಂದಿದ್ದಾರೆ

“ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ. 6 ತಿಂಗಳ ಭರ್ಜರಿ ಅತೀಂದ್ರೀಯ ಅಟ್ಟಹಾಸ. ‘ಕಾಸಿಗಾಗಿ ಹುದ್ದೆ ಮತ್ತು ಕಾಂಗ್ರೆಸ್‌ ಹುಂಡಿ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-DCM ನಿರ್ದೇಶಕ.. ಹೇಗಿದೆ?” ಎಂದು ಲೇವಡಿ ಮಾಡಿದ್ದಾರೆ

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement