ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನರಹಿತ ಹಾಗೂ ಅನುದಾನಿತ ಶಾಲೆಗಳ 2023–24ನೇ ಸಾಲಿನ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು (ಸಂಕಲನಾತ್ಮಕ ಮೌಲ್ಯಾಂಕನ/ಎಸ್ಎ–2) ಮಾರ್ಚ್ 11ರಿಂದ ಆರಂಭವಾಗಲಿವೆ.
5ನೇ ತರಗತಿಗೆ ಮಾರ್ಚ್ 11ರಿಂದ 14ರವರೆಗೆ, 8 ಹಾಗೂ 9ನೇ ತರಗತಿಗೆ ಮಾರ್ಚ್ 11ರಿಂದ 18ರವರೆಗೆ ಪರೀಕ್ಷೆ ಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಹೇಳಿದೆ.
http://kseab.karnataka.gov.in ನಲ್ಲಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.