ರಾಯ್ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಮಾವೋವಾದಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಬ್ ಇನ್‌ಸ್ಪೆಕ್ಟರ್ ಒಬ್ಬರು ಹುತಾತ್ಮರಾಗಿದ್ದಾರೆ. ಕಾನ್‌ಸ್ಟೇಬಲ್ ಒಬ್ಬರು ಗಾಯಗೊಂಡಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಸಬ್ ಇನ್‌ಸ್ಪೆಕ್ಟರ್ ಸುಧಾಕರ್ ರೆಡ್ಡಿ ಹುತಾತ್ಮರಾಗಿದ್ದಾರೆ. ಕಾನ್‌ಸ್ಟೇಬಲ್ ರಾಮು ಅವರಿಗೆ ಬುಲೆಟ್ ತಗುಲಿ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಿಆರ್‌ಪಿಎಫ್‌ನ 165ನೇ ಬೆಟಾಲಿಯನ್‌ನ ತಂಡವೊಂದು ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಜಗರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಗಾಯಗೊಂಡಿರುವ ಕಾನ್‌ಸ್ಟೇಬಲ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.