ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ 2024-25ನೇ ಸಾಲಿನ ವರ್ಗಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ವರ್ಗಾವಣೆ ಬಯಸುವ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಕೌನ್ಸೆಲಿಂಗ್ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಹೇಳಲಾಗಿದೆ. ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಅಧಿಕಾರಿಗಳು ಮಾ.18ರಿಂದ ಶಾಲೆಗಳ ವಲಯ ನಮೂದಿಸುವುದು ಸೇರಿದಂತೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು ಇಲಾಖೆ ಆಯುಕ್ತೆ ಬಿಬಿ ಕಾವೇರಿ ಅವರು ಸೂಚಿಸಿದ್ದಾರೆ.