ಬೆಂಗಳೂರು: ಮಿಚಾಂಗ್ ಚಂಡಮಾರುತ ಪ್ರಭಾವ ಸ್ವಲ್ಪ ಪ್ರಮಾಣದಲ್ಲಿ ಕರ್ನಾಟಕದ ಮೇಲೂ ಬೀರಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ,
ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಡಿಸೆಂಬರ್ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ರಾಯಚೂರು, ಕಲಬುರಗಿ, ಬೀದರ್, ದಕ್ಷಿಣ ಕನ್ನಡ, ಉಡುಪಿಯಲ್ಲೂ ಮಳೆಯಾಗಲಿದೆ.