ದಾವಣಗೆರೆ;ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಮೀನುಗಾರಿಕೆ ಇಲಾಖೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ವೃತ್ತಿಪರ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ, ರಿವರ್ ಗ್ಲಾಸ್ ಹರಿಗೋಲು ವಿತರಣೆ, ಮತ್ಸ್ಯಾ ವಾಹಿನಿ ಮತ್ತು ಮೀನು ಮಾರಾಟಕ್ಕೆ ಸಹಾಯ, ಮೀನು ಸಾಗಾಣಿಕೆ ವಾಹನ ಖರೀದಿಗೆ ಸಹಾಯ ಸೌಲಭ್ಯಗಳನ್ನು ನೀಡಲಾಗುವುದು.
ಆಸಕ್ತ ಮತ್ತು ಅರ್ಹ ಮೀನುಗಾರರು ನವಂಬರ್ 11 ರೊಳಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕ ಡಿ.ಅಣ್ಣಪ್ಪಸ್ವಾಮಿ ತಿಳಿಸಿದ್ದಾರೆ.