ರಾತ್ರಿ ಊಟದ ನಂತರ ಕೆಲವು ದೈಹಿಕ ಚಟುವಟಿಕೆಯನ್ನು ಮಾಡುವುದರಿಂದ ನಿಮ್ಮ ದೇಹದಲ್ಲಿ ಇನ್ಸುಲಿನ್ ಸಂವೇದನೆಯನ್ನು ಹೆಚ್ಚಿಸುತ್ತದೆ.
ಇದು ಬೆಳಗಿನ ಸಮಯದಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಬಹಳ ಸುಲಭವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ.
ಇನ್ನು ಯೋಗಾಭ್ಯಾಸದಿಂದ ಮುಂಜಾನೆ ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು.
ರಾತ್ರಿ ಊಟದ ನಂತರ ವಜ್ರಾಸನದಂತಹ ಯೋಗ ವ್ಯಾಯಾಮಗಳನ್ನು ಅಭ್ಯಾಸ ಮಾಡುವುದರಿಂದ ಮೇದೋಜೀರಕ ಗ್ರಂಥಿಯು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.