ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ವರಿಷ್ಠ HD ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಓರ್ವ ಯುವಕನನ್ನು ಗೆಲ್ಲಿಸಿ ಎಂದಿದ್ದಾರೆ.
ಈ ಮೂಲಕ ಪರೋಕ್ಷವಾಗಿ ಮತ್ತೊಮ್ಮೆ ಮೊಮ್ಮಗ ಪ್ರಜ್ವಲ್ ರೇವಣ್ಣ ಪರ ಬ್ಯಾಟ್ ಬೀಸಿದ್ದಾರೆ. ನಾನು ಮೋದಿ ಜತೆ ಸೇರಿದರೆ ತಪ್ಪೇನು? ದೇಶದ ನೂರು ಕೋಟಿ ಜನರಿಗೆ ನಾಯಕತ್ವ ಕೊಡುವ ವ್ಯಕ್ತಿತ್ವ ಇರೋದು ಮೋದಿಗೆ ಮಾತ್ರ ಎಂದಿದ್ದಾರೆ.!