ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಜುಲೈ 3ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಇಂದು ಎರಡು ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ, ಜೋಯಿಡಾ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ರಜೆ ನೀಡಿ ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ಆರ್ ಪುರ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು ವಸ್ತಾರೆ ಹೋಬಳಿಯ ವ್ಯಾಪ್ತಿಯ ಶಾಲೆಗಳಿಗೆ ಮಾತ್ರ ಇಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ನೀಡಿ ಆದೇಶಿಸಿದ್ದಾರೆ.