ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್. ಕೆ. ಅತೀಖ್ ನೇಮಕ

ಬೆಂಗಳೂರು: ರಾಜ್ಯ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಎಲ್ ಕೆ ಅತೀಖ್ ಅವರನ್ನು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಆ ಹುದ್ದೆಯಲ್ಲಿದ್ದ ಡಾ. ರಜನೀಶ್ ಗೋಯಲ್ ಅವರು ರಾಜ್ಯದ ಹೊಸ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಎಲ್ ಕೆ ಅತೀಖ್ ಅವರು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿಯೂ ಮುಂದಿನ ಆದೇಶದವರೆಗೆ ಹೆಚ್ಚುವರಿ ಹೊಣೆ ನಿರ್ವಹಿಸಲಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement