ಬೆಂಗಳೂರು: ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಅವರ ಕಾರ್ಯದರ್ಶಿಯಾಗಿದ್ದ ಡಾ.ತ್ರಿಲೋಕ್ ಚಂದ್ರ ಕೆ.ವಿ. ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಬಿ.ಬಿ.ಕಾವೇರಿ ಅವರಿಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಜೊತೆಗೆ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಸಮವರ್ತಿತ ಪ್ರಭಾರದ ಜವಾಬ್ದಾರಿ ವಹಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಸಮವರ್ತಿತ ಪ್ರಭಾರದ ಜವಾಬ್ದಾರಿಯಿಂದ ತ್ರಿಲೋಕ್ ಚಂದ್ರ ಅವರನ್ನು ಮುಕ್ತಗೊಳಿಸಲಾಗಿದೆ.
