ಮುಖ್ಯ ಮಂತ್ರಿ ಸಿದ್ದರಾಮಯ್ಯರನ್ನ ಹಗರಣದಲ್ಲಿ ಸಿಲುಕಿಸಲು ಬಿಜೆಪಿ ಜೆಡಿಎಸ್ ಹುನ್ನಾರ ಖಂಡಿಸಿ ಬೃಹತ್ ಪ್ರತಿಭಟನೆ.!

ಚಿತ್ರದುರ್ಗ : ಯಾವುದೇ ಕಪ್ಪು ಚುಕ್ಕೆಯಿಲ್ಲದೆ ಎರಡನೆ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರನ್ನು ಹಗರಣದಲ್ಲಿ ಸಿಲುಕಿಸಲು ಬಿಜೆಪಿ. ಮತ್ತು ಜೆಡಿಎಸ್. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹೊರಟಿರುವುದಕ್ಕೆ ಪ್ರತಿಯಾಗಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಮಾಜಿ ಸಚಿವ ಹೆಚ್.ಆಂಜನೇಯ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಬಿಜೆಪಿ. ಜೆಡಿಎಸ್. ಅಧಿಕಾರದಲ್ಲಿದ್ದಾಗ ನಡೆಸಿದ ಅವ್ಯವಹಾರ, ಭ್ರಷ್ಠಾಚಾರ, ಸ್ವಜನಪಕ್ಷಪಾತ ಮರೆತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹೊರಟಿದ್ದಾರೆ. ವಾಲ್ಮೀಕಿ ಅಭಿವೃದ್ದಿ ನಿಗಮ ಹಾಗೂ ಮುಡಾ ನಿವೇಶನ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರವಿಲ್ಲ. ನಮ್ಮ ಪಕ್ಷದ ಶಾಸಕರನ್ನು ಖರೀಧಿಸಿ ಪ್ರಜಾಪ್ರಭುತ್ವಕ್ಕೆ ಅಪಚಾರವೆಸಗಿ ವಾಮ ಮಾರ್ಗದಿಂದ ಅಧಿಕಾರ ಹಿಡಿದಿದ್ದ ವಿರೋಧಿಗಳು ವಿನಾ ಕಾರಣ ತೇಜೋವಧೆ ಮಾಡಲು ಹೊರಟಿದ್ದಾರೆ. ಸಂವಿಧಾನದ ಪ್ರತಿನಿಧಿಯಾಗಿರಬೇಕಾದ ರಾಜ್ಯಪಾಲರು ಬಿಜೆಪಿ. ಏಜೆಂಟ್ನಂತೆ ವರ್ತಿಸುತ್ತಿದ್ದಾರೆಂದು  ಟೀಕಿಸಿದರು.

ಮುಖ್ಯಮಂತ್ರಿಗೆ ನೋಟಿಸ್ ಕೊಡುವುದಕ್ಕಿಂತಲೂ ಮುನ್ನ ರಾಜ್ಯಪಾಲರು ಯೋಚಿಸಬೇಕಿತ್ತು. ಮುಖ್ಯಮಂತ್ರಿಗಳನ್ನು ಇಳಿಸುವುದು ಸುಲಭವಲ್ಲ. ಸಮಸ್ತ ಶೋಷಿತ ಸಮುದಾಯ ಸಿದ್ದರಾಮಯ್ಯನವರ ಪರವಾಗಿದೆ. ಎದೆಗುಂದುವುದು ಬೇಡ. ಬಿಜೆಪಿ. ಜೆಡಿಎಸ್. ಕುತಂತ್ರ ನಡೆಯಲ್ಲ. 9 ರಂದು ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೋಗೋಣ ಎಂದು ಹೇಳಿದರು.

Advertisement

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್ ಮಾತನಾಡಿ ಸಾಮಾಜಿಕ ನ್ಯಾಯದ ಹರಿಕಾರ, ಬಡವರ ಪರವಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ. ಮತ್ತು ಜೆಡಿಎಸ್. ಕುತಂತ್ರ ನಡೆಸುತ್ತಿದೆ. ಯಾವುದೆ ಕಳಂಕವಿಲ್ಲದೆ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯನವರ ವಿರುದ್ದ ಪಿತೂರಿ ನಡೆಸುತ್ತಿರುವ ವಿರೋಧಿಗಳು ರಾಜ್ಯಪಾಲರ ಮೂಲಕ ನೋಟಿಸ್ ಕೊಡಿಸಿರುವುದರಲ್ಲಿ ಅರ್ಥವಿಲ್ಲ. ರಾಜ್ಯಪಾಲರ ವಿರುದ್ದ ಗೋಬ್ಯಾಕ್ ಚಳುವಳಿ ನಡೆಸುವುದಾಗಿ ಎಚ್ಚರಿಸಿದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ.ಜಗದೀಶ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಪ್ರಧಾನಿ ಮೋದಿ ಮತ್ತು ಅಮಿತ್ಶಾ

ಇವರುಗಳು ರಾಜ್ಯಪಾಲರನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡು ನೋಟಿಸ್ ಜಾರಿ ಮಾಡಿಸಿ ಕಳೆದ ಹದಿನೈದು ದಿನಗಳಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಿರುಕುಳ ನೀಡುತ್ತಿದ್ದಾರೆ. ಬಸವರಾಜ್ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮುಡಾ ನಿವೇಶನವನ್ನು ಪಡೆದಿರುವುದು. ಭ್ರಷ್ಟಾಚಾರಕ್ಕೆ ಬಿಜೆಪಿ.ಯೇ ಹೊಣೆ. ಕೋತಿ ಮೊಸರನ್ನು ತಿಂದು ಮೇಕೆ ಬಾಯಿಗೆ ಹೊರೆಸಿದಂತಿದೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯನವರು ಮಂತ್ರಿಯಾಗಿ ವಿರೋಧ ಪಕ್ಷದ ನಾಯಕರಾಗಿ ಉಪ ಮುಖ್ಯಮಂತ್ರಿಯಾಗಿ ಎರಡನೆ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಸ್ವಚ್ಚ ಆಡಳಿತ ನಡೆಸುತ್ತಿರುವುದು ವಿರೋಧ ಪಕ್ಷಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಇಲ್ಲಿಯವರೆಗೂ ಹದಿನೈದು ಬಜೆಟ್ ಮಂಡಿಸಿ ಎಲ್ಲಾ ನಿಗಮಗಳಿಗೂ ಹಣ ಮಂಜೂರು ಮಾಡಿದ್ದಾರೆ. ಅದರ ನಿರ್ವಹಣೆ ಏನಿದ್ದರು ವ್ಯವಸ್ಥಾಪಕ ನಿರ್ದೇಶಕರಿಗೆ ಸೇರಿದ್ದು, ಹಾಗಾಗಿ ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಭಾಗಿಯಾಗಿರಲು ಹೇಗೆ ಸಾಧ್ಯ ಎಂದು ಬಿಜೆಪಿ. ಜೆಡಿಎಸ್.ನವರನ್ನು ಪ್ರಶ್ನಿಸಿದರು?

ಸಿದ್ದರಾಮಯ್ಯನವರಿಗೆ ರಾಜ್ಯಪಾಲರು ನೀಡಿರುವ ನೋಟಿಸ್ ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಶೋಷಿತ ಸಮುದಾಯಗಳು ಒಂದಾಗಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆಂದು ಬೆದರಿಕೆ ಹಾಕಿದರು.

ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಚೇರ್ಮನ್ ಡಾ.ಕೆ.ಅನ್ವರ್ಭಾಷಾ ಮಾತನಾಡುತ್ತ ಎರಡನೆ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ನಿಷ್ಕಳಂಕವಾಗಿ ಆಡಳಿತ ನಡೆಸುತ್ತಿರುವ

ಸಿದ್ದರಾಮಯ್ಯನವರಿಗೆ ಕೇಂದ್ರ ಬಿಜೆಪಿ. ರಾಜ್ಯಪಾಲರ ಮೂಲಕ ನೋಟಿಸ್ ಕೊಡಿಸಿದೆ. ಹಿಂದಕ್ಕೆ ಪಡೆಯಬೇಕು. ಇಲ್ಲದಿದ್ದಲ್ಲಿ ರಾಜಭವನ ಚಲೋ ಚಳುವಳಿ ನಡೆಸಲಾಗುವುದೆಂದರು.

ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಬೇಕೆಂದು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹೊರಟಿರುವ ಬಿಜೆಪಿ. ಮತ್ತು ಜೆಡಿ.ಎಸ್.ನವರು ರಾಜ್ಯಪಾಲರಿಂದ ನೋಟಿಸ್ ಕೊಡಿಸಿರುವುದನ್ನು ಹಿಂದಕ್ಕೆ ಪಡೆಯದಿದ್ದರೆ ರಾಜ ಭವನಕ್ಕೆ ಮುತ್ತಿಗೆ ಹಾಕಲಾಗುವುದೆಂದು ಎಚ್ಚರಿಸಿದರು.

ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ ವಿರೋಧ ಪಕ್ಷಗಳ ಪಿತೂರಿಗೆ ರಾಜ್ಯದ ಮುಖ್ಯಮಂತ್ರಿ ಹೆದರುವ ಅವಶ್ಯಕತೆಯಿಲ್ಲ. ಶೋಷಿತ ಸಮುದಾಯ ಹಾಗೂ ಹಿಂದುಳಿದ ಜಾತಿಗಳ ಒಕ್ಕೂಟ ಬೆನ್ನಿಗೆ ನಿಂತಿದೆ. ಅಧಿಕಾರದಿಂದ ಕೆಳಗಿಳಿಸಲು ಬಿಡುವುದಿಲ್ಲ ಎಂದು ಕಿಡಿಕಾರಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಉಪಾಧ್ಯಕ್ಷರುಗಳಾದ ಎಸ್.ಎನ್.ರವಿಕುಮಾರ್, ನಜ್ಮತಾಜ್, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಖುದ್ದೂಸ್, ಕೆಡಿಪಿ. ಸದಸ್ಯ ಕೆ.ಸಿ.ನಾಗರಾಜ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತನಂದಿನಿಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲ ಸುರೇಶ್ಬಾಬು, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಮೊಹಿದ್ದೀನ್, ಸೇವಾದಳದ ಇಂದಿರಾ, ಪವಿತ್ರ, ಸುಧ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಶ್ರಯ ಕಮಿಟಿ ಸದಸ್ಯೆ ಮುನಿರಾ ಎ.ಮಕಾಂದಾರ್, ಶ್ರೀಮತಿ ಮೋಕ್ಷರುದ್ರಸ್ವಾಮಿ, ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೇಣುಕಶಿವು, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ, ನಗರಸಭೆ ಮಾಜಿ ಸದಸ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಂ, ಮುದಸಿರ್ ನವಾಜ್, ಅಬ್ದುಲ್ಲಾ, ಗ್ಯಾರೆಂಟಿ ಅನುಷ್ಠಾ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ನ್ಯಾಯವಾದಿಗಳಾದ ಬೀಸ್ನಳ್ಳಿ ಜಯಣ್ಣ, ಸಿ.ಶಿವುಯಾದವ್, ಸುದರ್ಶನ್, ರವೀಂದ್ರ, ಮಹಮದ್ ರಫಿ, ದಲಿತ ಮುಖಂಡ ಬಿ.ರಾಜಪ್ಪ, ಮರುಳಾರಾಧ್ಯ, ಎ.ಸಾಧಿಕ್ವುಲ್ಲಾ, ಟಿ.ಸ್ವಾಮಿ ಸೇರಿದಂತೆ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

ಫೋಟೋ ವಿವರಣೆ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸುವ ಪಿತೂರಿ ನಡೆಸುತ್ತಿರುವ ಬಿಜೆಪಿ.ಜೆಡಿಎಸ್. ವಿರುದ್ದ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ.   ಫೋಟೋ-1.

 

ಫೋಟೋ ವಿವರಣೆ : ಸಿದ್ದರಾಮಯ್ಯನವರನ್ನು ಹಗರಣದಲ್ಲಿ ಸಿಲುಕಿಸಲು ವಿರೋಧ ಪಕ್ಷಗಳು ಕೈಗೊಂಡಿರುವ ಪಾದಯಾತ್ರೆಗೆ ಪ್ರತಿಯಾಗಿ ಪ್ರತಿಭಟನೆ ನಡೆಸಿದ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ.   ಫೋಟೋ-2.

 

ಚಿತ್ರದುರ್ಗ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ರವರ ಆದೇಶದಂತೆ ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ರೇಣುಕ ಶಿವು ಇವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಕಾಂಗ್ರೆಸ್ ಕಚೇರಿಯಲ್ಲಿ ರೇಣುಕಶಿವುರವರಿಗೆ ನೇಮಕಾತಿ ಪತ್ರ ನೀಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯನ್ನು ಸಂಘಟಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ ಪಕ್ಷಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್ಕುಮಾರ್, ಡಿ.ಎನ್.ಮೈಲಾರಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಅಬ್ದುಲ್ಲಾ, ಸೈಯದ್ ಅಲ್ಲಾಭಕ್ಷಿ ಈ ಸಂದರ್ಭದಲ್ಲಿ ಹಾಜರಿದ್ದರು.

 

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement