ಮುಗಿದ 2 ಸಾವಿರ ರೂಪಾಯಿ ನೋಟ್ ಆಯುಷ್ಯ….ವಿನಿಮಯಕ್ಕೆ ಇಂದು ಕೊನೆ ದಿನ…!!

WhatsApp
Telegram
Facebook
Twitter
LinkedIn

ನವದೆಹಲಿ: ಕಳೆದ ಮೇ ನಲ್ಲಿ 2,000ರು.ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದುಕೊಂಡಿದ್ದ ಆರ್‌ಬಿಐ, ಬಳಿಕ ಅವುಗಳನ್ನು ಬ್ಯಾಂಕ್‌ಗೆ ಹಿಂದಿರುಗಿಸಲು ನೀಡಿದ್ದ 3 ತಿಂಗಳ ಗಡುವಿಗೆ ಶನಿವಾರ ಸೆಪ್ಟೆಂಬರ್ 30 ದಿನವಾಗಿದೆ.

ಹೀಗಾಗಿ ಕೊನೆಯ ದಿನ ಸಾರ್ವಜನಿಕರು ತಮ್ಮ ಹತ್ತಿರದ ಯಾವುದೇ ಬ್ಯಾಂಕ್‌ಗೆ ತೆರಳಿ ತಮ್ಮಲ್ಲಿರುವ 2,000 ರು. ಮುಖ ಬೆಲೆಯ ನೋಟು ನೀಡಿ ಇತರ ನೋಟುಗಳಿಂದ ಬದಲಿಸಿಕೊಳ್ಳಬಹುದು ಅಥವಾ ತಮ್ಮ ಬ್ಯಾಂಕ್ ಖಾತೆಯಲ್ಲಿ ಠೇವಣಿ ಮಾಡಬಹುದಾಗಿದೆ. ಈ ನಡುವೆ ಗಡುವು ಮುಗಿದ ಬಳಿಕವೂ ನೋಟುಗಳನ್ನು ಹಿಂದಿರುಗಿಸಲು ಸಾಧ್ಯವಾಗದಿದ್ದರೆ ಏನು ಮಾಡಬೇಕೆಂಬ ಪ್ರಶ್ನೆ ಎದ್ದಿದೆ. ಆದರೆ ಈ ಬಗ್ಗೆ ಅಕ್ಟೋಬರ್ 1 ರಂದು ಆರ್‌ಬಿಐ ತನ್ನ ಯಾವುದೇ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಗಡುವು ವಿಸ್ತರಿಸದೆ ನೋಟು ಅಮಾನ್ಯ ಮಾಡಬಹುದು ಎನ್ನಲಾಗುತ್ತಿದೆ.

ಈಗಾಗಲೇ ಚಲಾವಣೆಯಲ್ಲಿದ್ದ 3.32 ಲಕ್ಷ ಕೋಟಿ ರು. ಮೌಲ್ಯದ ನೋಟುಗಳ ಪೈಕಿ ಆ.31ರ ವೇಳೆಗೆ ಶೇ.93ರಷ್ಟು ನೋಟುಗಳು ಬ್ಯಾಂಕುಗಳಿಗೆ ಮರಳಿದ್ದವು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon