ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಆರಂಭ ಮಾಡಲಿದ್ದಾರೆ.
ಈಗಾಗಲೇ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದ್ದು ಮೊದಲು ದೂರುದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಿದೆ. ಜೊತೆಗೆ ದೂರುದಾರರ ಬಳಿ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನು ಪೊಲೀಸರು ಸಂಗ್ರಹ ಮಾಡಲಿದ್ದಾರೆ.
ಇನ್ನೊಂದೆಡೆ ನಿವೃತ್ತ ನ್ಯಾ. ದೇಸಾಯಿ ತನಿಖಾ ಸಮಿತಿ ಬಳಿಯಿರುವ ದಾಖಲೆ ಪಡೆಯಲು ಕಾನೂನು ಪ್ರಕ್ರಿಯೆ ಶುರುವಾಗಲಿದೆ. ಆ ದಾಖಲೆಗಳು ಸಿಕ್ಕ ನಂತರ ಆರೋಪಿಗಳಿಗೆ ಹಂತ ಹಂತವಾಗಿ ನೋಟಿಸ್ ಜಾರಿಗೊಳಿಸುವ ಸಾಧ್ಯತೆಯಿದೆ.
ಮುಡಾ ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶಿಸಿದ್ದರು.