ಬೆಂಗಳೂರು :ಮುಡಾಹಗರಣಕ್ಕೆ ಸಂಬಂಧಿಸಿದಂತೆ ಹಲವು ಜಟಾಪಟಿಗಳು ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಪರ ನಡುವೆ ನಡೆದಿತ್ತು. ಇದರ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರನ್ನು ಭೇಟಿ ನೀಡಿದ್ದಾರೆ.
ಬೆಂಗಳೂರಿಗೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಹೀಗಾಗಿ ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನಕ್ಕೆ ತೆರಳಿದ್ದ ಸಿದ್ದರಾಮಯ್ಯ ಈ ವೇಳೆ ಭೇಟಿ ಮಾಡಿ ನಗುಮುಖದಿಂದಲೇ ಕೈಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ.
ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಇತ್ತೀಚೆಗೆ ಅನುಮತಿ ನೀಡಿದ್ದರು. ಇದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚನಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದರು