ಕಣ್ಣೂರು: ಮತ್ತೆ ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ ಭಾರತ ದೇಶವು ಅಪಾಯಕ್ಕೆ ಸಿಲುಕುತ್ತದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ದೇಶದಲ್ಲಿನ ವೈವಿಧ್ಯತೆಯನ್ನು ನಾಶಪಡಿಸಲು ಮತ್ತು ಧರ್ಮದ ಆಧಾರದ ಮೇಲೆ ರಾಷ್ಟ್ರವನ್ನು ರಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಪ್ರತಿಯೊಬ್ಬರು ತಮ್ಮ ಧರ್ಮ, ಜಾತಿ ಅಥವಾ ಪಂಥವನ್ನು ಲೆಕ್ಕಿಸದೆ ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿದ್ದಾರೆ, ಆದರೆ ದೇಶದಲ್ಲಿ ಅದನ್ನು ಬದಲಾಯಿಸಲಾಗುತ್ತಿದೆ. ದೇಶವು ಈ ಸತ್ಯವನ್ನು ಅರಿತುಕೊಂಡಿದೆ ಮತ್ತು ಈ ಅಪಾಯವನ್ನು ತಪ್ಪಿಸಬೇಕಾಗಿದೆ ಎಂಬುದು ಸಾರ್ವಜನಿಕ ಅಭಿಪ್ರಾಯವಾಗಿದೆ. ಆದ್ದರಿಂದ, ಬಿಜೆಪಿಯು ಮತ್ತೆ ಮೂರನೇ ಅವಧಿಗೆ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವ ಉದ್ದೇಶದಿಂದ ಜಾತ್ಯತೀತ ಮನೋಭಾವದ ಗುಂಪುಗಳು ಮತ್ತು ಜನರ ಏಕೀಕೃತ ರಂಗವನ್ನು ರಚಿಸಲಾಗಿದೆ ಎಂದಿದ್ದಾರೆ.