ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಪಕ್ಷದಿಂದ ಮೂರು ತಂಡಗಳನ್ನು ರಚನೆ ಮಾಡಲಾಗಿದೆ.
ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿ.ಎನ್.ಅಶ್ವತ್‌ನಾರಾಯಣ, ಸಂಡೂರಿಗೆ ಸಿ ಟಿ ರವಿ, ಶಿಗ್ಗಾವಿಗೆ ಆರ್ ಅಶೋಕ್ ನೇತೃತ್ವದ ತಂಡವನ್ನು ರಚಿಸಲಾಗಿದೆ. ಬೈ ಎಲೆಕ್ಷನ್ ನಡೆಯುವ ಮೂರು ಕ್ಷೇತ್ರಗಳಿಗೆ ತೆರಳಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುವಂತೆ ಸೂಚಿಸಲಾಗಿದೆ. ಬಳಿಕ ವರದಿಯನ್ನು ಹೈಕಮಾಂಡ್‌ಗೆ ಕಳಿಸಲು ಬಿಜೆಪಿ ನಿರ್ಧರಿಸಿದೆ
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
ಚನ್ನಪಟ್ಟಣದಿಂದ ಜೆಡಿಎಸ್ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಗೆಲುವು ಸಾಧಿಸಿ ಕೇಂದ್ರ ಸಚಿವರಾಗಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರಿಂದ ತೆರವಾದ ಶಾಸಕ ಸ್ಥಾನಕ್ಕಾಗಿ ಬೈಎಲೆಕ್ಷನ್ ನಡೆಯಲಿದೆ. ಇನ್ನು ಸಂಡೂರು ಕಾಂಗ್ರೆಸ್ ಶಾಸಕರಾಗಿದ್ದ ಇ ತುಕಾರಾಂ ಅವರು ಬಳ್ಳಾರಿ ಕ್ಷೇತ್ರದಿಂದ ಗೆದ್ದಿದ್ದರಿಂದ ಸಂಡೂರು ಕ್ಷೇತ್ರಕ್ಕೆ ಬೈಎಲೆಕ್ಷನ್ ನಡೆಯಲಿದೆ.