ದಾವಣಗೆರೆ;ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಸಾಮಾನ್ಯ ಪದವಿ ಮಟ್ಟದ ಕೋರ್ಸುಗಳ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾತಿಗೆ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡ ರಸ್ತೆ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಶಿವಕುಮಾರ್ ಸ್ವಾಮಿ ಬಡಾವಣೆ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲPರÀ ವಿದ್ಯಾರ್ಥಿನಿಲಯ, ಗುತ್ತೂರು ಕಾಲೋನಿ,ಹರಿಹರ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕೆರೆಬಿಳಚಿ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಜಗಳೂರು ಟೌನ್ ಈ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 12 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ :08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಛೇರಿ ದೂರವಾಣಿ : 08192-250066 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.
“ ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.”