ಚಿತ್ರದುರ್ಗ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 11 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
2023-24ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಸಲ್ಲಿಸಬಹುದು.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ, ಎಸ್.ಟಿ ರೂ.2.50 ಲಕ್ಷ ಒಳಗಿರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1 ಲಕ್ಷ ಒಳಗಿರಬೇಕು.
ವಿದ್ಯಾರ್ಥಿಗಳು https://shp.karnataka.gov.in ವೆಬ್‍ಸೈಟ್‍ನ್ನು ಸಂಪರ್ಕಿಸಿ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು, ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಅದೇಶಕ್ಕಾಗಿ ಇಲಾಖೆಯ https://bcwd.karnataka.gov.in ವೆಬ್‍ಸೈಟ್‍ಯನ್ನು ಸಂಪರ್ಕಿಸಬಹುದು, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ವೆಬ್‍ಸೈಟ್‍ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ ಮತ್ತು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.