ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಯೋಜನೆಗೆ ಅರ್ಜಿ ಆಹ್ವಾನ

 

ದಾವಣಗೆರೆ, : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, “ಶುಲ್ಕ ವಿನಾಯಿತಿ”, ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೆಬ್‍ಸೈಟ್  https://ssp.postmatric.karnataka.gov.in    ಅಥವಾ  https://bcwd.karnataka.gov.in      ಮೂಲಕ ಅರ್ಜಿಯನ್ನು 2024 ಜನವರಿ,10 ರೊಳಗೆ ಸಲ್ಲಿಸಬೇಕು.

Advertisement

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ: 8050770005. ಇಮೇಲ್ :  [email protected]    ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್:  [email protected]     ನ್ನು ಸಂಪರ್ಕಿಸಬಹುದಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement