ನವದೆಹಲಿ: ದೆಹಲಿ ಮೆಟ್ರೊ ಕೋಚ್‌ನಲ್ಲಿ ವ್ಯಕ್ತಿಯೊಬ್ಬ ಬೀಡಿ ಸೇದುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಮೆಟ್ರೊ ರೈಲು ನಿಗಮ(ಡಿಎಂಆರ್‌ಸಿ), ‘ನಾವು ಅಂತಹ ಯಾವುದೇ ಆಕ್ಷೇಪಾರ್ಹ ನಡವಳಿಕೆಯನ್ನು ಪತ್ತೆಹಚ್ಚಲು ಫ್ಲೈಯಿಂಗ್ ಸ್ಕ್ವಾಡ್‌ಗಳ ಮೂಲಕ ತಪಾಸಣೆ ನಡೆಸುತ್ತೇವೆ. ಆ ರೀತಿಯ ಘಟನೆ ಕಂಡುಬಂದರೆ ತಕ್ಷಣವೇ ನಮ್ಮ ಗಮನಕ್ಕೆ ತರಲು ನಾವು ಸಾರ್ವಜನಿಕರಿಗೆ ಮನವಿ ಮಾಡುತ್ತೇವೆ, ಆದರಿಂದ ತಪ್ಪಿತಸ್ಥರ ತಕ್ಷಣದ ಕ್ರಮವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ’ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಸಾಮಾಜಿಕ ಮಾಧ್ಯಮಗಳ ಮೂಲಕ ರೈಲುಗಳಲ್ಲಿ ಸಾರ್ವಜನಿಕ ಶಿಷ್ಟಾಚಾರಗಳು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ನಗರ ಸಾರಿಗೆ ಅಧಿಕಾರಿಗಳು ಪ್ರಯತ್ನಿಸುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.