ಚಿತ್ರದುರ್ಗ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಮೇ.19ರಂದು ಬೆಳಿಗ್ಗೆ 11 ಗಂಟೆಗೆ ಪ್ರವೇಶ ಪರೀಕ್ಷೆ ಜರುಗಲಿದೆ.
ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ವಸತಿ ಶಾಲೆಗಳ ಪ್ರಾಂಶುಪಾಲರಿಂದ ಪ್ರವೇಶ ಪತ್ರಗಳನ್ನು ಪಡೆದು ಪ್ರವೇಶ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ.
ಈ ಪರೀಕ್ಷೆಗೆ ಸಂಬಂಧಿಸಿದಂತೆ ಹಿರಿಯೂರು ತಾಲ್ಲೂಕು ದೇವರಕೊಟ್ಟ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಹಿರಿಯೂರು ನಗರದ ಕೆಎಸ್‍ಆರ್‍ಟಿಸಿ ಬಸ್ ಸ್ಟ್ಯಾಂಡ್ ಎದುರಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು, ಚಳ್ಳಕೆರೆಯ ಶಾಂತಿನಗರದ ಸೈನಿಕ ಆಸ್ಪತ್ರೆ ಹತ್ತಿರದ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ, ಚಳ್ಳಕೆರೆ ನಗರದ ತಾಲ್ಲೂಕು ಆಡಳಿತ ಕಚೇರಿ ಪಕ್ಕದ ಹೆಗ್ಗೆರೆ ತಾಯಮ್ಮ ಸರ್ಕಾರಿ ಬಾಲಕಿಯರ ಪೌಢಶಾಲೆ ಹಾಗೂ ಚಿತ್ರದುರ್ಗ ನಗರದ ನಿರ್ಮಿತಿ ಕೇಂದ್ರದ ಬಳಿ ಇರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಅನ್ನು ಪರೀಕ್ಷಾ ಕೇಂದ್ರಗಳಾಗಿ ಹಂಚಿಕೆ ಮಾಡಲಾಗಿದೆ. ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.