ಮೇ 9 ಅಥವಾ 10ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 9 ಅಥವಾ 10ರಂದು ಪ್ರಕಟವಾಗುವ ಸಾಧ್ಯತೆ ಇದೆ ಮೂಲಗಳು ತಿಳಿಸಿವೆ.

ಮೇ 7 ರಂದು ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯುವುದರಿಂದ ಫಲಿತಾಂಶ ವಿಳಂಬವಾಗುತ್ತಿದೆ. ಆದರೂ ಕೂಡ ಇದೇ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ಫಲಿತಾಂಶದ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (ಕೆಎಸ್ ಇಎಬಿ) ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಶಿಕ್ಷಣ ಇಲಾಖೆಯ ವೆಬ್‌ಸೈಟ್ ನಲ್ಲಿ ಕೂಡ ಪ್ರಕಟವಾಗಲಿದೆ. ಜೊತೆಗೆ ಆಯಾ ಶಾಲೆಗಳಲ್ಲಿಯೂ ಫಲಿತಾಂಶ ಪ್ರಕಟವಾಗುತ್ತದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement