ಮಂಗಳೂರು: ‘ಮೈತ್ರಿ ಮುಟ್ಟಿನ ಕಪ್’ ಯೋಜನೆಯ ರಾಯಭಾರಿಯಾಗಿ ಕಾಂತಾರ ಖ್ಯಾತಿಯ ನಟಿ ಸಪ್ತಮಿಗೌಡ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಯೋಜನೆಗೆ ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ‘ರಾಯಭಾರಿಯಾಗಿ ನೇಮಕ ಮಾಡಿದ್ದಕ್ಕೆ ಆತ್ಮಸ್ಥೆರ್ಯ ಇಮ್ಮಡಿಗೊಳಿಸಿದೆ’ ಎಂದು ನಟಿ ಸಪ್ತಮಿಗೌಡ ತಿಳಿಸಿದ್ದಾರೆ.
ರಾಜ್ಯ ಸರ್ಕಾರ, 17 ವರ್ಷ ಮೇಲ್ಪಟ್ಟ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಮುಟ್ಟಿನ ಕಪ್ ಉಚಿತವಾಗಿ ವಿತರಿಸಲು ಈ ಯೋಜನೆಯನ್ನು ಆರಂಭಿಸಿದೆ.