ಮೈಸೂರು : ಯತೀಂದ್ರ ಸಿದ್ದರಾಮಯ್ಯಗೆ ಪರಿಷತ್ ಟಿಕೆಟ್ ನೀಡಬೇಕು ಎಂದು ಬೆಂಬಲಿಗರ ಒತ್ತಾಯ ಹಿನ್ನಲೆ ಈ ಕುರಿತು ಮೈಸೂರಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೆ, ಹೈಕಮಾಂಡ್ ಕೋಲಾರ ಬೇಡ ವರುಣದಿಂದ ಸ್ಪರ್ಧೆ ಮಾಡಿ ಅಂತ ಹೇಳಿದ್ರು. ಆಗ ಯತೀಂದ್ರ ಸಿಟ್ಟಿಂಗ್ ಎಂಎಲ್ಎ ಆಗಿದ್ರು. ಹೈಕಮಾಂಡ್ ಯತೀಂದ್ರಗೆ ಸೀಟು ಬಿಟ್ಟುಕೊಡಿ ಮುಂದೆ ನಿಮ್ಮನ್ನ ಎಂಎಲ್‌ಸಿ ಮಾಡ್ತೇವೆ ಅಂತ ಹೇಳಿದ್ರು. ಈಗ ಹೈಕಮಾಂಡ್ ಏನು ಮಾಡ್ತಾರೆ ಅಂತ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಲೋಕಸಭೆ ಚುನಾವಣೆ ಫಲಿತಾಂಶ ಬೆನ್ನಲ್ಲೆ, ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಚುನಾವಣೆ ನಡೆಸಲು ನಾವು ತಯಾರಿದ್ದೇವೆ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ಚುನಾವಣೆ ಮಾಡುತ್ತೇವೆ ಎಂದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಮೊದಲು ಕ್ಷೇತ್ರ ಪುನರ್ ವಿಂಗಡಣೆ ಆಗುತ್ತೆ, ನಂತರ ಮೀಸಲಾತಿ ಪ್ರಕಟಿಸುತ್ತೇವೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.