ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿಡಿಮದ್ದು ತಾಲೀಮು ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಸಿಡಿಮದ್ದು ಸಿಡಿದು ಸಿಬ್ಬಂದಿಗೆ ಸುಟ್ಟ ಗಾಯವಾಗಿದೆ. ನಿನ್ನೆ ಅರಮನೆಯಲ್ಲಿ ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡುವ ರಿಹರ್ಸಲ್ ವೇಳೆ ಘಟನೆ ನಡೆದಿದ್ದು, ಈ ವೇಳೆ ರಾಷ್ಟ್ರಗೀತೆ ನುಡಿಸಿ 21 ಸುತ್ತು ಕುಶಾಲತೋಪು ಸಿಡಿಸಲಾಗಿತ್ತು. ಈ ವೇಳೆ ಕುಶಾಲತೋಪು ಸಿಡಿದು ಸಿಬ್ಬಂದಿಗೆ ಗಾಯವಾಗಿದ್ದು, ಗಾಯಗೊಂಡ ಸಿಬ್ಬಂದಿಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.