ಬೆಂಗಳೂರು: ಹೈದರಾಬಾದ್ನಲ್ಲಿ ಮೈಸೂರು ಸ್ಯಾಂಡಲ್ ನಕಲಿ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಲ್ಪಟ್ಟ ಇಬ್ಬರು ಆರೋಪಿಗಳು ಸಹ ಬಿಜೆಪಿಯ ಸಕ್ರಿಯ ನಾಯಕರು, ಕಾರ್ಯಕರ್ತರು ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿರುವ ರಾಕೇಶ್ ಜೈನ್, ಮಹಾವೀರ್ ಜೈನ್ ಇವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿಯ ರಾಜಾ ಸಿಂಗ್ ಜೊತೆಗೆ ನಿಕಟ ಸಂಪರ್ಕದಲ್ಲಿದ್ದಾರೆ.
ಅನಾಮಿಕನೊಬ್ಬ ಸಚಿವ ಎಂಬಿ ಪಾಟೀಲ್ ಅವರಿಗೆ ಕರೆ ಮಾಡಿ ಮೈಸೂರು ಸ್ಯಾಂಡಲ್ ನಕಲಿ ಸೋಪ್ ಮಾರಾಟದ ಬಗ್ಗೆ ಮಾಹಿತಿ ನೀಡುತ್ತಾನೆ. ಬಳಿಕ ಅವರು ಇಲ್ಲಿನ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟದ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದು, ಬಳಿಕ ನಮ್ಮ ಅಧಿಕಾರಿಗಳು ನಕಲಿ ಸೋಪ್ ತಯಾರಿಕೆ ಮತ್ತು ಮಾರಾಟ ಜಾಲ ಪತ್ತೆ ಹಚ್ಚಲು ಮುಂದಾಗಿದ್ದಾರೆ ಎಂದು ಹೇಳಿದರು.