ರಾಂಚಿ: ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗಲಿ ನಾಲ್ವರು ಮೃತಪಟ್ಟು, ಸುಮಾರು 10 ಮಂದಿ ಗಾಯಗೊಂಡಿರುವ ಘಟನೆ ಬೊಕಾರೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಬೊಕಾರೊ ಜಿಲ್ಲೆಯ ಖೆಟ್ಕೊ ಎನ್ನುವ ಗ್ರಾಮದಲ್ಲಿ ಮೊಹರಂ ಆಚರಣೆ ನಡೆಯುತ್ತಿತ್ತು. ಕಬ್ಬಿಣದ ಧಾರ್ಮಿಕ ಧ್ವಜವು ಮೆರವಣಿಗೆ ವೇಳೆ ಆಕಸ್ಮಿಕವಾಗಿ 11 ವೋಲ್ಟ್ ನ ವಿದ್ಯುತ್ ತಂತಿಗೆ ತಗಲಿದ್ದು, ಪರಿಣಾಮವಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಬೊಕಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ ಸುಮಾರು 6 ಗಂಟೆಯ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದೆ.