ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಣಿಪುರಕ್ಕಿಂತ ಇಸ್ರೇಲ್ ಮೇಲೆಯೇ ಹೆಚ್ಚು ಆಸಕ್ತಿ ಇದ್ದಂತೆ ಕಾಣುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮೋದಿಯವರಿಗೆ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕಿಂತ ಇಸ್ರೇಲ್-ಹಮಾಸ್ ಯುದ್ಧದ ಬಗೆಗಿನ ಆಸಕ್ತಿಯೇ ಹೆಚ್ಚಿದ್ದಂತೆ ಕಾಣುತ್ತಿದೆ ಎಂದರು.
ಇನ್ನು ಪ್ರಧಾನಿ ಮತ್ತು ಭಾರತ ಸರ್ಕಾರವು ಇಸ್ರೇಲ್ನಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ತುಂಬಾ ಆಸಕ್ತಿ ಹೊಂದಿದೆ, ಆದರೆ ಮಣಿಪುರದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಆಸಕ್ತಿ ಇಲ್ಲ ಎಂಬುದು ನನಗೆ ಆಶ್ಚರ್ಯಕರವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.


































