ಪುಣೆ: ಪುಣೆಯಲ್ಲಿ ಪತ್ರಕರ್ತ ನಿಖಿಲ್ ವಾಗ್ಲೆ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ನಿಖಿಲ್ ವಾಗ್ಲೆ ಅವರು ಪುಣೆಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಹೊರಟಿದ್ದ ವೇಳೆ ವಾಹನದ ಮೇಲೆ ಗುಂಪುಗೂಡಿದ ಬಿಜೆಪಿ ಕಾರ್ಯಕರ್ತರು ಕಾರಿನ ವಿಂಡ್‌ಸ್ಕ್ರೀನ್ ಮತ್ತು ಪಾರ್ಶ್ವದ ಗಾಜುಗಳನ್ನು ಹಾನಿಗೊಳಿಸಿದ್ದು, ಅದರ ಮೇಲೆ ಶಾಯಿಯನ್ನು ಎಸೆದಿರುವುದನ್ನು ವೀಡಿಯೊಗಳು ತೋರಿಸಿವೆ.
ಇನ್ನು ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಬಿಜೆಪಿ ಸರ್ಕಾರ ಭಾರತ ರತ್ನ ಘೋಷಿಸಿದ ಬಳಿಕ ನಿಖಿಲ್ ವಾಗ್ಲೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಡ್ವಾಣಿ ವಿರುದ್ಧ ಟೀಕೆ ಮಾಡಿದ್ದರು. ಹೀಗಾಗಿ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಘಟನೆಯ ನಂತರ ಪೊಲೀಸರು ಮಧ್ಯಪ್ರವೇಶಿಸುವ ಮೊದಲು ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸ್ವಲ್ಪ ಸಮಯದ ವಾಗ್ವಾದ ನಡೆದಿದೆ ಎನ್ನಲಾಗಿದೆ.