‘ಮೋದಿ ಅವರೇ ಕನ್ನಡಿಗರ ಮೇಲೇಕೆ ಈ ಮಲತಾಯಿ ಧೋರಣೆ’? – ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಪ್ರಧಾನಿ ಮೋದಿ ಅವರೇ ಜಗತ್ತಿನ ದುಃಖಕ್ಕೆಲ್ಲ ಮಿಡಿಯುವ ನಿಮ್ಮ ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ, ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿದ್ದು, ಕೇಂದ್ರ ಸರ್ಕಾರ ನಯಾಪೈಸೆ ಪರಿಹಾರ ಬಿಡುಗಡೆಮಾಡಿಲ್ಲ. ಮೋದಿ ಅವರೇ ಜಗತ್ತಿನ ದುಃಖಕ್ಕೆಲ್ಲ ಮಿಡಿಯುವ ನಿಮ್ಮ ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಇನ್ನು 2017ರಲ್ಲಿ ಬರದಿಂದ ತತ್ತರಿಸಿಹೋಗಿದ್ದ ಕರ್ನಾಟಕದ ಜನತೆ ಕೇಂದ್ರದ ನೆರವಿಗಾಗಿ ನಿಮ್ಮತ್ತ ನೋಡುತ್ತಿದ್ದರು. ಆದರೆ ನಿಮ್ಮಿಂದ ನಮಗೆ ಸಿಕ್ಕಿದ್ದು ಬಿಡಿಗಾಸು ಪರಿಹಾರ ಎಂದರು.

Advertisement

ಪ್ರಧಾನಿ ಮೋದಿ ಅವರೇ ಕನ್ನಡಿಗರ ಮೇಲೇಕೆ ಈ ಮಲತಾಯಿ ಧೋರಣೆ? ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಎಂದು ವಾಗ್ದಾಳಿ ನಡೆಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement